ಹಾವೇರಿ: ಹಾವೇರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.
ಹಾವೇರಿ ಜಿಲ್ಲೆಯಲ್ಲಿ ನಸುಕಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ರಭಸಕ್ಕೆ 13 ಜನ ಸಾವನ್ನಪ್ಪಿದ್ದಾರೆ. ದೇವರ ದರ್ಶನ ಪಡೆದು ಬರುತ್ತಿದ್ದವರು ಮಸಣ ಸೇರಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಹಾವೇರಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Date: