ಹುಬ್ಬಳ್ಳಿ: ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ. ಕಾಂಗ್ರೆಸ್‌ನ ಒಳ ಬೇಗುದಿಯಿಂದ ಶಾಸಕರ ಅಸಮಾಧಾನವೇ ಸರ್ಕಾರಕ್ಕೆ ಎಫೆಕ್ಟ್ ಆಗುತ್ತದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ. ಕಾಂಗ್ರೆಸ್‌ನ ಒಳ ಬೇಗುದಿಯಿಂದ ಶಾಸಕರ ಅಸಮಾಧಾನವೇ ಸರ್ಕಾರಕ್ಕೆ ಎಫೆಕ್ಟ್ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಂದ ಎಲೆಕ್ಷನ್‌ನಲ್ಲಿ ಲಾಭ ಆಗುತ್ತೆ ಅಂತ ತಿಳಿದುಕೊಂಡಿದ್ದರು.
ಲಾಭ ಆಗಿಲ್ಲ ಹೀಗಾಗಿ ವಾಪಸ್ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಗ್ಯಾರಂಟಿ ಅನುಷ್ಠಾನಕ್ಕಾಗಿ ಸರ್ಕಾರದ ಖಜಾನೆ ಖಾಲಿ ಆಗುತ್ತಿದೆ. ವರಮಾನ ಹೆಚ್ಚಿಗೆ ಮಾಡಿಕೊಳ್ಳಲು ಡೀಸೆಲ್, ಪೆಟ್ರೋಲ್, ಹಾಲು, ಬಸ್ ಪ್ರಯಾಣ ದರ ಹೆಚ್ಚಳ ಮಾಡುತ್ತಿದ್ದಾರೆ. ಜನಸಾಮಾನ್ಯರು ಬಡವರು ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ಖಜಾನೆ ಖಾಲಿಯಾಗುತ್ತಿದೆ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಇದನ್ನೆಲ್ಲ ವಿಚಾರ ಮಾಡಿ ಸಿದ್ದರಾಮಯ್ಯನವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಬಿಜೆಪಿ ಆಪರೇಷನ್ ಕಮಲ ಮತ್ತೊಂದು ಮಾಡುವುದು ಬೇಕಾಗಿಲ್ಲ !
Date: