ಬೆಂಗಳೂರು: ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಪಕ್ಷ ಕಟ್ಟಲು ಬಹಳ ಕಷ್ಟಪಟ್ಟಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೇ ಗೊತ್ತು.
ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇನ್ನೂ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೊಟೀಸ್ ನೀಡಬೇಕಾಗುತ್ತದೆ. ಪಕ್ಷದ ಶಿಸ್ತು ಕಾಪಾಡಲು ಅನಿವಾರ್ಯವಾಗಿ ನೋಟಿಸ್ ನೀಡುತ್ತೇವೆ ಎಂದು ಹೇಳಿದ್ದಾರೆ.
ಡಿಸಿಎಂ, ಸಿಎಂ ವಿಚಾರಕ್ಕೆ ಯಾವುದೇ ಚರ್ಚೆ ಆಗಿಲ್ಲ: ಡಿಕೆ ಶಿವಕುಮಾರ್
Date: