ಟಿ 20 ಗೆ ಬಾಯ್ ಬಾಯ್ ಅಂದ ವಿರಾಟ್ ! ಕಾರಣ ಗೊತ್ತಾ ?

Date:

ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...