ವಿಜಯಪುರ: ವಾಲ್ಮೀಕಿ ನಿಗಮ ಹಗರಣದ ಲಿಂಕ್ ದೆಹಲಿವರೆಗೂ ಇದೆ, ಹಾಗಾಗಿ ಇದರ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕೆಂದು ತಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಆಗ್ರಹಿಸುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಗರಣದಲ್ಲಿ ಕೇವಲ ಬಿ ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು.
ಯಾಕೆಂದರೆ ಈ ದುರ್ವ್ಯವಹಾರ ಹಣಕಾಸು ಸಚಿವರೂ ಅಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿರುವುದಿಲ್ಲ, ಅವರೂ ಇದಕ್ಕೆ ಹೊಣೆಗಾರರು, ಆ 187ಕೋಟಿ ರೂ. ತೆಲಂಗಾಣದ ಬಾರ್ ಗಳಲ್ಲಿ ಖರ್ಚಾಗಿದೆ, ಅಲ್ಲಿನ ಚಿನ್ನಾಭರಣಗಳ ಅಂಗಡಿಗಳಿಗೆ ಹೋಗಿದೆ ಎಂದು ಯತ್ನಾಳ್ ಹೇಳಿದರು. ವಾಲ್ಮೀಕಿ ನಿಗಮ ಹಗರಣದ ಲಿಂಕ್ ದೆಹಲಿವರೆಗೂ ಇದೆ, ಹಾಗಾಗಿ ಇದರ ತನಿಖೆಯನ್ನು ಸಿಬಿಐಗೆ ವಹಿಸಿಕೊಡಬೇಕೆಂದು ತಾನು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಆಗ್ರಹಿಸುತ್ತೇನೆ ಎಂದು ಅವರು ಹೇಳಿದರು.