ಚಿಕ್ಕಮಗಳೂರು:ರಾಹುಲ್ ಅವರು ಚೊಚ್ಚಲ ಭಾಷಣದಲ್ಲಿಯೇ ನಾನು ಆ ಸ್ಥಾನಕ್ಕೆ ಯೋಗ್ಯನಲ್ಲ. ನನಗೆ ಭಾರತ, ಭಾರತೀಯತೆ, ಹಿಂದೂ, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎನ್ನುವುದನ್ನು ಪ್ರದರ್ಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಹಿಂದೂ ಅಂತ ಹೇಳುವವರು ದ್ವೇಷ ಭಾವನೆ ಬಿತ್ತುವವರು ಎಂಬ ಆರೋಪ ಮಾಡಿದ್ದಾರೆ.
ಹಿಂದೂ ಎನ್ನುವುದು ಸರ್ವೇ ಜನಾಃ ಸುಖಿನೋ ಭವಂತು ಎಂಬುದನ್ನು ಪ್ರತಿಪಾದಿಸಿದೆ. ಹಿಂದೂ ಎನ್ನುವುದು ವಿಶ್ವ ಒಂದು ಕುಟುಂಬ ಅಂತ ಭಾವಿಸುವುದು, ಹಿಂದೂ ಎನ್ನುವುದು ಅಣುರೇಣು ತೃಣ ಕಾಷ್ಟಗಳಲ್ಲೂ ಭಗವಂತನನ್ನು ಕಾಣುವುದು, ಹಿಂದೂ ಎಂದರೆ ಮನುಷ್ಯ ಮಾತ್ರವಲ್ಲ ಮರಗಿಡ-ಪ್ರಾಣಿ, ಪಕ್ಷಿಗಳೂ ಚೆನ್ನಾಗಿರಬೇಕೆಂದು ಪ್ರಾರ್ಥಿಸುವುದು” ಎಂದು ಹೇಳಿದರು.
ಮುಂದುವರೆದು, “ರಾಹುಲ್ ಅವರು ಚೊಚ್ಚಲ ಭಾಷಣದಲ್ಲಿಯೇ ನಾನು ಆ ಸ್ಥಾನಕ್ಕೆ ಯೋಗ್ಯನಲ್ಲ. ನನಗೆ ಭಾರತ, ಭಾರತೀಯತೆ, ಹಿಂದೂ, ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎನ್ನುವುದನ್ನು ಪ್ರದರ್ಶಿಸಿದ್ದಾರೆ. ಸಹಸ್ರಾರು ವರ್ಷದ ಸನಾತನ ಪರಂಪರಗೆ ಅಪಮಾನದ ಕೆಲಸ ಮಾಡಿರುವ ಅವರು ರಾಷ್ಟ್ರದ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು.
ಹಿಂದುತ್ವದ ಬಗ್ಗೆ ಏನೂ ಗೊತ್ತಿಲ್ಲ ಎನ್ನುವುದನ್ನು ರಾಹುಲ್ ಪ್ರದರ್ಶಿಸಿದ್ದಾರೆ !
Date: