ಮೈಸೂರು: ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ.
ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.
ಸೂರಜ್ ಮಹಾನ್ ದೈವ ಭಕ್ತ :ಹೆಚ್.ಡಿ ರೇವಣ್ಣ
Date: