ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿ ದೇಶ ಮುನ್ನಡೆಸ್ತಿದ್ದಾರೆ ಎಂದು B.Y.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನಾಯಕತ್ವದ ಬಗ್ಗೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೊದಲ ಬಾರಿ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಯ ಚೊಚ್ಚಲ ಭಾಷಣ ಸುಳ್ಳು, ನಿರಾಸೆ & ಅಧಾರ ರಹಿತವಾಗಿತ್ತು. ಸಂಸತ್ತಿನ ಘನತೆಗೆ ರಾಹುಲ್ ಗಾಂಧಿ ದಕ್ಕೆ ತಂದಿದ್ದಾರೆ,
ಲೋಕಸಭೆ ಚುನಾವಣೆ ಸಂದರ್ಭದಲ್ಲೂ ರಾಹುಲ್ ಸುಳ್ಳು ಹೇಳ್ತಿದ್ರು. ಈಗಲೂ ಹಳೇ ಚಾಳಿಯನ್ನೇ ಮುಂದುವರೆಸಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದರು. ಇನ್ನೂ ಹಿಂಸಾಚಾರ ಮತ್ತು ದ್ವೇಷದಲ್ಲಿ ನಿರತರಾಗಿದ್ದಾರೆಂದು ಉಲ್ಲೇಖಿಸಿದ್ದಾರೆ. ಹಿಂದೂಗಳು ಹಗಲಿರುಳು ದ್ವೇಷದಲ್ಲಿ ನಿರತರಾಗಿದ್ದಾರೆಂದು ಹೇಳಿದ್ದಾರೆ. ರಾಹುಲ್ ಗಾಂಧಿ ಹಿಂದೂಗಳಿಗೆ ಅವಮಾನ ತೇಜೋವದೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಸತ್ತಿನ ಘನತೆಗೆ ರಾಹುಲ್ ಗಾಂಧಿ ದಕ್ಕೆ ತಂದಿದ್ದಾರೆ !
Date: