ಬೆಂಗಳೂರು: ರಾಜ್ಯದಲ್ಲಿ ಡೆಂಘಿ ರುದ್ರ ನರ್ತನ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಏರಿಕೆ ಕಾಣ್ತಿರೋ ಡೆಂಘಿ ಕೇಸ್ ಗಳು ಆರೋಗ್ಯ ಇಲಾಖೆ ನಿದ್ದೆಕೆಡಿಸಿದೆ. ಇದರ ಬೆನ್ನಲ್ಲೇ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆಗೆ ಏಕರೂಪ ದರ ನಿಗದಿಪಡಿಸಲಾಗಿದೆ. ಒಂದು ವೇಳೆ ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗು ತ್ತಿರುವುದರಿಂದ ಆತಂಕ ಮೂಡಿದೆ.
ಆದ್ದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆಗೆ ಏಕರೂಪ ದರ ನಿಗದಿಪಡಿಸಲಾಗಿದೆ. ಒಂದು ವೇಳೆ ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಮನೆ ಸುತ್ತಮುತ್ತಾ ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಯಂತ್ರಿಸಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಜನರು ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹೇಳಿದರು.
ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ !
Date: