ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಇದಕ್ಕೆ ಕಾರಣವಾದ ಅಂಶಗಳನ್ನು ಗುರುತಿಸಿ ಬಿಬಿಎಂಪಿ ಇದೀಗ ಕ್ರಮಕ್ಕೆ ಮುಂದಾಗಿದೆ.. ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ.
50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.
ಡೆಂಗ್ಯೂಗೆ ಕಾರಣವಾಗುತ್ತಿರುವ ಕಸದ ರಾಶಿ: ಎಲ್ಲೆಂದರಲ್ಲಿ ಕಸ ಹಾಕಿದ್ರೆ ಹುಷಾರ್
Date: