No menu items!
27.4 C
Munich
Thursday, August 13, 2026

ಬೆಳ್ಳಂಬೆಳಗ್ಗೆ ರಸ್ತೆ ಮಧ್ಯದಲ್ಲೇ ಸುಟ್ಟು ಭಸ್ಮವಾದ ಬಸ್‌ !

Must read

ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿ BMTC ಬಸ್‌ ಹೊತ್ತಿ ಉರಿದ ಘಟನೆ ನಡೆದಿದೆ. ಬಸ್ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ ರೋಸ್ ಗಾರ್ಡನ್ನಿಂದ ಶಿವಾಜಿನಗರಕ್ಕೆ ಬರುತ್ತಿತ್ತು.
ಮಾರ್ಗ ಮಧ್ಯೆ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್ನಲ್ಲಿ ಚಾಲಕ ಬಸ್ ಬಂದ್ ಮಾಡಿದ್ದರು. ಮತ್ತೆ ಸ್ಟಾರ್ಟ್ ಆಗಿಲ್ಲ. 2-3 ಸಲ ಸ್ಟಾರ್ಟ್ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಟಾರ್ಟ್ ಆಗಲಿಲ್ಲ. ಈ ವೇಳೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಭಸ್ಮವಾಗಿದೆ.

- Advertisement -spot_img

More articles

- Advertisement -spot_img

Latest article