ಮೈಸೂರು: ಮೂಡಾ ಅಕ್ರಮದ ಘಾಟು ಜೋರಾಗ್ತಿದ್ದು, ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ನಡೆದ ಮೂಡಾ ಅಕ್ರಮದ ವಾಸನೆ ಎಲ್ಲೆಲ್ಲಿಗೋ ಹೋಗ್ತಿದೆ, ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪ ಹೊರಿಸಲಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ,
ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರು ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದಾರೆ. ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ. ಪತ್ರದ ಮೂಲಕ ಪ್ರಕರಣ ಸಂಬಂಧ ಹಲವು ಪ್ರಶ್ನೆ ಎತ್ತಿದ್ದಾರೆ.
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು!
Date: