ರಾಮನಗರ:ಇಂದು ಬೆಳಗ್ಗಿನಿಂದಲೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ
Date: