ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ: ದಿವ್ಯಾ ವಸಂತಾ ಅರೆಸ್ಟ್‌

Date:

ಬೆಂಗಳೂರು: ಬ್ಲಾಕ್ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವಾಹಿನಿ ನಿರೂಪಕಿ ದಿವ್ಯಾ ವಸಂತಾ ಅರೆಸ್ಟ್‌ ಆಗಿದ್ದಾಳೆ. ರಾಜ್ಯವೇ ಖುಷಿಕೊಡುವ ಸುದ್ದಿ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯ ವಸಂತಳನ್ನು ಜೀವನ್ ಭೀಮಾನಗರ ಪೊಲೀಸರು ಕೇರಳದಲ್ಲಿ ಬಂಧಿಸಿ ಕರೆತಂದಿದ್ದಾರೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವರನ್ನು ಪೊಲೀಸರು ಬಂದಿಸಿದ್ದರು.
ಬೆಂಗಳೂರಿನ ಇಂದಿರಾನಗರದಲ್ಲಿರುವ ಮಸಾಜ್‌ ಪಾರ್ಲರ್‌ & ಸ್ಪಾದ ವ್ಯವಸ್ಥಾಪಕನಿಗೆ ಬೆದರಿಗೆ 15 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ನಿರೂಪಕಿ ಹಾಗೂ ಕಲರ್ಸ್‌ ಕನ್ನಡದ ಗಿಚ್ಚಿ ಗಿಲಿಗಿಲಿ ಶೋನಲ್ಲಿ ಭಾಗಿಯಾಗಿದ್ದ ದಿವ್ಯ ವಸಂತ ಕೂಡ ಆರೋಪಿಯಾಗಿದ್ದಾರೆ. ಆಕೆಯ ಸ್ನೇಹಿತ ಸಂದೇಶ್‌ ಈಗಾಗಲೇ ಬಂಧಿತನಾಗಿದ್ದಾನೆ. ಅದರೊಂದಿಗೆ ರಾಜ್‌ ನ್ಯೂಸ್‌ ಸುದ್ದಿವಾಹಿನಿಯ ಕಾರ್ಯನಿರ್ವಾಹಕ ಅಧಿಕಾರಿ ರಾಜಾನುಕುಂಟೆ ವೆಂಕಟೇಶ್‌ನನ್ನು ಜೆಬಿ ನಗರ ಪೊಲೀಸರು ಬಂಧಿಸಿದ್ದಾರೆ. ಇದರ ನಡುವೆ ದಿವ್ಯಾ ವಸಂತ ಕೂಡ ಅರೆಸ್ಟ್‌ ಆಗಿದ್ದಾಳೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...