ನೆಲಮಂಗಲ: ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು. ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ.
ಆದರೆ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ಬಿಜೆಪಿ ಮುಖಂಡರನ್ನು ಮನೆ ಬಳಿಯೇ ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿ ಜಾರಿಗೊಳಿಸಿದೆ ಎನಿಸುತ್ತಿದೆ. ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುವ ಕೆಲಸ ಮಾಡುತ್ತಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು.