ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.
ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ. ಮಾ.16 ರಂದು ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕಾರ ಮಾಡಿದ್ದರು. ಬಳಿಕ ವೇತನ ಆಯೋಗದ ಶಿಫಾರಸು ಜಾರಿ ಬಗ್ಗೆ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಕುರಿತು ಮಾಹಿತಿ ಕೇಳಲಾಗಿತ್ತು.
ಇದೀಗ ಹಣಕಾಸು ಇಲಾಖೆಯ ವರದಿ ಬಳಿಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನ ಸಂಪುಟ ಸಭೆಯಲ್ಲಿ ಸಿಎಂ ಪ್ರಕಟಿಸಿದ್ದಾರೆ. 27.5% ವೇತನ ಹೆಚ್ಚಳಕ್ಕೆ ಶಿಫಾರಸ್ಸು ವೇತನ ಆಯೋಗ ಶಿಫಾರಸು ಮಾಡಿತ್ತು. 27% ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.