ಬೆಂಗಳೂರು: ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಗ್ರಾಮದ ನಾಗರಾಜ್ ತಮ್ಮ ತಂದೆ ತಾಯಿ ಜೊತೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರೋ ಜಿ.ಟಿ. ಮಾಲ್‌ಗೆ ಸಿನಿಮಾ ನೋಡೋಕೆ ಬಂದಿದ್ರು. ಹೀಗೆ ಮಾಲ್ ಒಳಗೆ ಎಂಟ್ರಿ ಕೊಡ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ನಾಗರಾಜ್ ತಂದೆ ಪಂಚೆ ತೊಟ್ಟಿದ್ದಾರೆ.
ಮಾಲ್‌ನ ಒಳಗೆ ಪಂಚೆ ತೊಟ್ಟವರಿಗೆ ಪ್ರವೇಶವಿಲ್ಲ ಅಂತ ಅಲ್ಲೇ ತಡೆದಿದ್ದಾರೆ. ಇದನ್ನ ಪ್ರಶ್ನಿಸಿದ ಬಳಿಕ ಎಂಟ್ರಿ ಕೊಟ್ಟ ಮಾಲ್ ಮ್ಯಾನೇಜರ್ ಕೂಡಾ ಅದೇ ರಾಗಾ ತೆಗೆದಿದ್ದಾನೆ.
ಅಷ್ಟೇ ಅಲ್ಲ. ಸುಮಾರು ಅರ್ಧ ಗಂಟೆಗಳ ಕಾಲ ಮಾಲ್ ಒಳಗೆ ಬಿಡದೇ ಸಿಬ್ಬಂದಿ ಸತಾಯಿಸಿದ್ದಾರೆ. ಸಿನಿಮಾ ವೀಕ್ಷಣೆಗೆ ಹೋಗಲೂ ಬಿಡದೇ ಗೇಟ್ ಬಳಿಯೇ ಕೂರಿಸಿ ಅವಮಾನ ಮಾಡಿದ್ದಾರೆ. ಇದನ್ನೆಲ್ಲಾ ಕಂಡು ವೃದ್ಧನ ಪುತ್ರ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಲ್ ಸಿಬ್ಬಂದಿ ತೋರಿದ ದರ್ಪವನ್ನೆಲ್ಲಾ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ್ದಾರೆ.
ಪಂಚೆ ಹಾಕೊಂಡು ಬಂದಿದ್ದ ರೈತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ!
Date: