ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ʼಗೆ ರೈತನೋರ್ವ ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ಆತನನ್ನು ಮಾಲ್ ಒಳಗೆ ಎಂಟ್ರಿ ಕೊಟ್ಟಿರಲಿಲ್ಲ. ಆದರೆ ಇಂದು ಅದೇ ಮಾಲ್ನ ಸಿಬ್ಬಂದಿ ರೈತನನ್ನು ಕರೆಸಿ ಸನ್ಮಾನ ಮಾಡಿದ್ದಾರೆ. ಹೌದು ವೃದ್ಧ ಪಂಚೆ ಧರಿಸಿದ್ದ ಎಂಬ ಕಾರಣಕ್ಕೆ ಮಾಲ್ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಸದ್ಯ ಈಗ ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ಮಾಲ್ನಿಂದಲೇ ಸನ್ಮಾನ ಮಾಡಲಾಗಿದೆ. ರೈತ ಫಕೀರಪ್ಪಗೆ ಶಾಲು ಹಾಕಿ ಸನ್ಮಾನಿಸಲಾಗಿದೆ. ಮಾಲ್ ಇನ್ಚಾರ್ಜ್ ಸುರೇಶ್ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ: ಇಂದು ಹಾರ ಹಾಕಿ ಸನ್ಮಾನ
Date: