ಬೆಂಗಳೂರು: ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮುನಿಯಲ್ಲಪ್ಪ(46) ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಇದೇ ಜುಲೈ.16ರಂದು ಅಸ್ತಮಾ, ಹೊಟ್ಟೆನೋವು, ಜ್ವರ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಒಂದೇ ದಿನಕ್ಕೆ ಡಿಸ್ಚಾರ್ಜ್ ಕೂಡ ಆಗಿದ್ದರು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮುನಿಯಲ್ಲಪ್ಪ,
ಇಂದು ಮತ್ತೆ ಆನೇಕಲ್ ತಾಲೂಕು ಆಸ್ಪತ್ರೆಗೆ ಬಂದಿದ್ದ. ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು, ಆಸ್ಪತ್ರೆ ಬಿಲ್ಡಿಂಗ್ನ ಸಜ್ಜಾದ ಮೇಲೆ ಮುನಿಯಲ್ಲಪ್ಪ ಬಿದ್ದಿದ್ದ. ಇದೀಗ ಘಟನಾ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮುನಿಯಲ್ಲಪ್ಪನ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ. ಈ ಕುರಿತು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ರೋಗಿ ಆತ್ಮಹತ್ಯೆ!
Date: