ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ !

Date:

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ಹೇಳಿದರು.
ಇನ್ನೂ ಕೇವಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ, ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ನಿನ್ನೆ ರಾಜ್ಯದ 5 ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...