ನವದೆಹಲಿ: ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ 15 ಸಾವಿರ ರೂ. ವೇತನ ನೀಡಲಾಗುವುದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ ಎಂದರು. ಇನ್ನೂ ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.
ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ತಿಳಿಸಿದರು.