ಬೆಂಗಳೂರು: ನಾಟಕ, ನೌಟಂಕಿ ಬಿಟ್ಟು ಬಿಡಿ. ವಾಲ್ಮೀಕಿ ಹಣವನ್ನು ಚುನಾವಣೆ ಪ್ರಚಾರಕ್ಕೆ ಬಳಸಿದ್ದಾರೆ. ನಿಮ್ಮ ಇಲಾಖೆಯ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪ ಮಾಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 4600 ಕಿಮೀ ರಸ್ತೆ ಈಗಾಗಲೇ ನಿರ್ಮಾಣವಾಗಿದೆ. ಹೆದ್ದಾರಿ ರಸ್ತೆ ನಿರ್ಮಾಣಕ್ಕಾಗಿ ೧ ಲಕ್ಷಕ್ಕೂ ಹೆಚ್ಚು ಕೋಟಿಯ ರಸ್ತೆ ಆಗಿದೆ. ಬೆಂಗಳೂರು-ಚೆನ್ನೈ ರಸ್ತೆ ಸೇರಿ ಮೂರು ಹೆದ್ದಾರಿ ಕಾಮಗಾರಿ ಆಗುತ್ತಿವೆ. ಆದರೆ ಇದರಲ್ಲಿ ರಾಜ್ಯದ ಪಾಲು ಎಷ್ಟು? ಎಂದು ಪ್ರಶ್ನಿಸಿದರು.
ಕರ್ನಾಟಕ ಸರ್ಕಾರ ಎಲ್ಲದರಲ್ಲೂ ತೆರಿಗೆ ಹೆಚ್ಚಿಸಿದೆ. ದರ ಕೂಡ ಹೆಚ್ಚಳ ಆಗುತ್ತಿದೆ. ಸಹಜವಾಗಿ ಹಣದುಬ್ಬರ ಎದ್ದು ಕಾಣುತ್ತಿದೆ. ಕಂಪನಿಗಳು ಹೊರ ರಾಜ್ಯಕ್ಕೆ ಹೋಗುತ್ತಿವೆ. ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆ. ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬರುತ್ತಿಲ್ಲ. ಎಸ್ಟಿ ಎಸ್ಸಿ ಹಣ ಬೇರೆ ಯೋಜನೆಗೆ ಬಳಕೆಯಾಗಿದೆ. ವಾಲ್ಮೀಕಿ ಹಣ ಏನಾಗಿದೆ ಅಂತ ನಿಮಗೆ ಗೊತ್ತು. ರಾಜ್ಯದಲ್ಲಿ ಈ ರೀತಿಯ ಆಡಳಿತ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದರು.