ಮಂಡ್ಯ: ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್ಎಸ್ಗೆ ಬಾಗಿನ ಅರ್ಪಿಸುತ್ತಿದ್ದಾರೆ.
ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ ಅಂದರೆ ಕಳೆದ ವರ್ಷ ಕೂಡ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲ್ಲ. ಇದೀಗ ಮತ್ತೆ ಸಿಎಂ ಆಗಿರುವಾಗಲೇ ಭರ್ತಿಯಾಗಿದೆ. ಹೀಗಾಗಿ ಜಿಲ್ಲಾಡಳಿತ ಎಲ್ಲ ಸಿದ್ದತೆ ಮಾಡಿಕೊಂಡಿದೆ.