ಗಂಡನ ಅಕ್ರಮ ಸಂಬಂಧಕ್ಕೆ ಬೇಸೆತ್ತು ವಿವಾಹತೆ ಮಹಿಳೆ ಆತ್ಮಹತ್ಯೆ.!

Date:

 

ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸೆತ್ತು ವಿವಾಹತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂದ್ರಹಳ್ಳಿ ನಡೆದಿದೆ. ಮಾನಸ (25)ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಗಂಡನ ಮನೆಯಲ್ಲಿ ವಾಸವಿದ್ದ ಮಾನಸ ಭಾನುವಾರ ಸಂಜೆ 4 ಗಂಟೆಯ ವೇಳೆಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿನಲ್ಲಿ ನೇತಾಡುವ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ. 6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ವಿವಾಹ ನಡೆದಿತ್ತು.
ದಂಪತಿಗೆ 5 ವರ್ಷದ ಒಂದು ಹೆಣ್ಣು ಮಗು ಇದೆ. ಕಳೆದ ಒಂದೂವರೆ ವರ್ಷದಿಂದ ದಿಲೀಪ್‌ ಬೇರೊಂದು ಮಹಿಳೆಯ ಸಹವಾಸ ಮಾಡಿದ್ದಾನೆ. ಈ ವಿಚಾರಕ್ಕೆ ಪತಿ, ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ವಿಚಾರಕ್ಕೆ ಬೇಸತ್ತು ಮಾನಸ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್‌ ಮಾಡಲಾಗಿದ್ದು, ಇನ್ನೂ ಈ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ: ನಟ ಅನಂತನಾಗ್‌ ಭಾವುಕ

ಭೈರಪ್ಪ ಅವರದ್ದು ಹಿಮಾಲಯದಷ್ಟೇ ಎತ್ತರದ ವ್ಯಕ್ತಿತ್ವ ಎಂದು ನಟ ಅನಂತನಾಗ್‌ ಭಾವುಕರಾದರು. ನವರಾತ್ರಿಯ...

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...