ಬೆಂಗಳೂರು: ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ದುರ್ಮರಣ ಪ್ರಕರಣಕ್ಕೆ ಸಂಬಂಧಸಿದಂತೆ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕನಾಗಿದ್ದು, ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ. ಹಲಸೂರು ಗೇಟ್ ಸಂಚಾರ ಪೊಲೀಸರು ಅಪಘಾತದ ಬಗ್ಗೆ ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.