ಬಂದೂಕು ತೋರಿಸಿ ಹಾಡಹಗಲೇ ಆಭರಣ ಅಂಗಡಿ ಲೂಟಿ !

Date:

ಪುಣೆ:- ಹಾಡಹಗಲೇ ಮೂವರು ವ್ಯಕ್ತಿಗಳು ಬಂದೂಕು ತೋರಿಸಿ ಆಭರಣ ಅಂಗಡಿಯನ್ನು ಲೂಟಿ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. ಇಡೀ ಘಟನೆ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದರೋಡೆಕೋರರು ಅಂಗಡಿಗೆ ನುಗ್ಗಿ ಅಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ದೋಚಿದ್ದಾರೆ. ವಿಡಿಯೊದಲ್ಲಿ, ದರೋಡೆಕೋರರಲ್ಲಿ ಒಬ್ಬರು ಅಂಗಡಿಯೊಳಗಿನ ವ್ಯಕ್ತಿಯ ಮೇಲೆ ಬಂದೂಕನ್ನು ಗುರಿಯಾಗಿಸಿಕೊಂಡರೆ, ಇನ್ನೊಬ್ಬ ವ್ಯಕ್ತಿಯ ಕಾಲರ್ ಹಿಡಿದು ಕೆಳಕ್ಕೆ ತಳ್ಳುತ್ತಿದ್ದಾನೆ. ಮೂರನೆಯವನು ಅಂಗಡಿಯೊಳಗೆ ಇದ್ದ ವಸ್ತುಗಳನ್ನು ತೆಗೆದುಕೊಂಡಿದ್ದಾನೆ ಮತ್ತು ನಂತರ, ಮೂವರು ಅಂಗಡಿಯಿಂದ ಹೊರಗೆ ಹೋಗಿದ್ದಾರೆ

ಪುಣೆಯ ಲಕ್ಷ್ಮಿ ಚೌಕ್ ಹಿಂಜೇವಾಡಿಯಲ್ಲಿ ಬೆಳಿಗ್ಗೆ 10:30 ಕ್ಕೆ ಈ ಘಟನೆ ನಡೆದಿದ್ದು, ಕೆಲವೇ ಸೆಕೆಂಡುಗಳಲ್ಲಿ ದರೋಡೆಕೋರರು ಅಂಗಡಿಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಜಾಗ ಖಾಲಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಪೊಲೀಸರು ಅದನ್ನು ಪರೀಶಿಲಿಸಿ ಕಳ್ಳರನ್ನು ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ!

ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ! ಬೆಂಗಳೂರು: ಪ್ರಸಿದ್ಧ ಕನ್ನಡ...

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...