ಬಾಂಗ್ಲಾದೇಶ: ಬಾಂಗ್ಲಾ ದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾ ದೇಶ ಪ್ರಧಾನ ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವ ಶೇಖ್ ಹಸೀನಾ, ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಶೇಖ್ ಹಸೀನಾ ಅವರು ದೇಶ ಬಿಟ್ಟು ಓಡಿ ಹೋಗಿದ್ಧಾರೆ ಎಂದೂ ಹೇಳಲಾಗುತ್ತಿದೆ. ಈ ಹಿಂಸಾಚಾರದಲ್ಲಿ ಬಾಂಗ್ಲಾ ದೇಶಾದ್ಯಂತ ಸುಮಾರು 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಂದಾಗಿ ಶೇಖ್ ಹಸೀನಾ ಅವರು ಸುರಕ್ಷಿತ ಸ್ಥಳಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಉದ್ಯೋಗ ಕೋಟಾ ವ್ಯವಸ್ಥೆಯ ಬಗ್ಗೆ ಹಸೀನಾ ಅವರ ರಾಜೀನಾಮೆಯ ಒಂದು ಅಂಶದ ಬೇಡಿಕೆಯೊಂದಿಗೆ ತಾರತಮ್ಯದ ವಿರುದ್ಧ ವಿದ್ಯಾರ್ಥಿಗಳ ಬ್ಯಾನರ್ ಅಡಿಯಲ್ಲಿ ಅಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಆಡಳಿತಾರೂಢ ಅವಾಮಿ ಲೀಗ್, ಛತ್ರ ಲೀಗ್ ಮತ್ತು ಜುಬೊ ಲೀಗ್ ಕಾರ್ಯಕರ್ತರ ಬೆಂಬಲಿಗರಿಂದ ವಿರೋಧವನ್ನು ಎದುರಿಸಿದಾಗ ಘರ್ಷಣೆಗಳು ಭುಗಿಲೆದ್ದವು.