ಮೈಸೂರು:- ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮುಂದುವರಿದಿದೆ.
ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರ ರಾತ್ರಿ ಪಾದಯಾತ್ರೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ತಲುಪಿತ್ತು. ಇಂದು ನಾಲ್ಕನೇ ದಿನದ ಪಾದಯಾತ್ರೆ ಆರಂಭವಾಗಿದ್ದು, ಮಂಡ್ಯ ನಗರಕ್ಕೆ ತಲುಪಲಿದೆ. ಮೈತ್ರಿ ನಾಯಕರು ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಲ್ಕನೇ ದಿನದ ಪಾದಯಾತ್ರೆಯನ್ನು ಬಾಣ ಬಿಡುವ ಮೂಲಕ ಚಾಲನೆ ನೀಡಲಾಯಿತು. ಪಾದಯಾತ್ರೆಯಲ್ಲಿ ಮಹಿಳೆಯರು ಪೂರ್ಣ ಕುಂಬ ಹೊತ್ತು ಸಾಗುತ್ತಿದ್ದಾರೆ. ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುರುಗೇಶ್ ನೀರಾಣಿ, ಬಿಸಿ ಪಾಟೀಲ್ ಭಾಗಿಯಾಗಿದ್ದಾರೆ.
ಇನ್ನೂ ಜೆಡಿಎಸ್, ಬಿಜೆಪಿ ಪಾದಯಾತ್ರೆ ಕಾಂಗ್ರೆಸ್ ನಾಯಕರಿಗೆ ತಲೆ ನೋವಾಗಿ ಪರಿಣಮಿಸಿದ್ದು, ಸರ್ಕಾರ ಉಳುವಿಕೆಯ ಬಗ್ಗೆ ಪ್ರಶ್ನೆ ಎದ್ದಿದೆ. ಆದ್ರೆ ಪಾದಯಾತ್ರೆ ಯಾವ ಸ್ವರೂಪ ಪಡೆಯಲಿದೆ ಕಾದು ನೋಡಬೇಕಾಗಿದೆ.