ಬೆಂಗಳೂರು: ಬಿಜೆಪಿ ಹಾಗೂ ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ,
ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.