ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು: ರೌಡಿ ಶೀಟರ್ ಕಾಲಿಗೆ ಗುಂಡೇಟು
Date: