ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 2 ಗಂಟೆಗೆ ಶುರುವಾದ ಮಳೆ ಮುಂಜಾನೆವರೆಗೂ ಅಬ್ಬರಿಸಿ ಬೊಬ್ಬಿರಿದಿದೆ. ಭಾರಿ ಮಳೆಯಿಂದ ಸಿಲಿಕಾನ್ ಸಿಟಿ ಜಲಮಯವಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಮುಭಾಗದ ರಸ್ತೆ ಮುಳುಗಡೆಯಾಗಿದೆ. ಸುಮಾರು 2 ಅಡಿಯಷ್ಟು ನೀರು ಆವರಿಸಿತ್ತು. ಗುಂಡಿಗಳು ಯಾವುದೋ, ರಸ್ತೆಯಾವುದೇ ಒಂದು ಕಾಣದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರೋರಾತ್ರಿ ಬೆಂಗಳೂರಲ್ಲಿ ದಿಢೀರ್ ಮಳೆ ಸುರಿದಿದ್ದು,
ಮನೆಯಿಂದ ಹೊರಬಂದವರು ನಲುಗಿ ಹೋಗಿದ್ದಾರೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಟೌನ್ಹಾಲ್, ಜಯನಗರ ಸೇರಿ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದು ಸುಮಾರು 1 ಕಿ.ಲೋ ಮೀಟರ್ ಟ್ರಾಫಿಕ್ ಜಾಮ್ ಆಗಿತ್ತು. ಹೊಸರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಿದ್ದು ಸವಾರರು ಪರದಾಡುತ್ತಿದ್ದಾರೆ.