ಬೆಂಗಳೂರು: ಕಿಲ್ಲರ್ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದುಕೊಂಡಿದೆ. ರಸ್ತೆ ದಾಟುತ್ತಿದ್ದ ವೃದ್ಧೆಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ವೃದ್ದೆಯನ್ನು ಆಂಧ್ರಪ್ರದೇಶದ ಚಿತ್ತೂರಿನ ಆದಿಲಕ್ಷ್ಮಮ್ಮ (69) ಎಂದು ಗುರುತಿಸಲಾಗಿದ್ದು,
ನಿನ್ನೆ ಬೆಳಗ್ಗೆ ಕುಮಾರಸ್ವಾಮಿ ಲೇಔಟ್ ನ ಜಂಬೂಸವಾರಿ ದಿಣ್ಣೆ ಬಳಿ ರಸ್ತೆ ದಾಟುತ್ತಿದ್ದ ವೇಳೆ ಯಮವೇಗವಾಗಿ ಬಂದ ಕಸದ ಟಿಪ್ಪರ್ ಲಾರಿ ವೃದ್ಧೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬಿಬಿಎಂಪಿ ಕಸದ ಲಾರಿ ಚಾಲಕ ಮಹಮ್ಮದ್ ಎಂಬಾತನನ್ನು ಕೆ ಎಸ್ ಲೇಔಟ್ ಸಂಚಾರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.