ವಾಟ್ಸಾಪ್ ಬಳಸಿ, ಸಮಯ ಉಳಿಸಿ: ಮೈಸೂರು ಅರಮನೆ ನೋಡಲು ಹೀಗೆ ಮಾಡಿ!

Date:

 

ಮೈಸೂರು:- ಮೈಸೂರಿನ ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸ್‌ಆ್ಯಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅ.3 ರಿಂದ ಅ.12 ರ ವರೆಗೆ ಜರುಗಲಿದೆ. ಇದಕ್ಕಾಗಿ ಈಗಾಗಲೇ ತಯಾರಿ ಶುರುವಾಗಿದೆ. ಇನ್ನು ಮತ್ತೊಂದೆಡೆ ಇಂದಿನಿಂದ ಮೈಸೂರು ಅರಮನೆ ವೀಕ್ಷಣಗೆ ವಾಟ್ಸಾಪ್​​ ಟಿಕೆಟ್ ನೀಡಲಾಗುತ್ತಿದೆ.

ಮೈಸೂರು ಅರಮನೆ ನೋಡಲು ಬರುವ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಪ್ರವಾಸಿಗರು ಸರ್ಕಾರದ ಇಡಿಸಿಎಸ್ ಮೊಬೈಲ್ ಒನ್ ಯೋಜನೆಯ ಮೂಲಕ ಮೊಬೈಲ್​ನಲ್ಲೆ ಅರಮನೆ ವೀಕ್ಷಣೆಗೆ ಟಿಕೆಟ್ ಖರೀದಿ ಮಾಡಬಹುದು. ವಾಟ್ಸಾಪ್​​ನಲ್ಲಿ 8884160088 ನಂಬರ್​ಗೆ ಎಜಿ ಎಂದು ಟೈಪ್ ಮಾಡಿ ಸಂದೇಶ ಕಳಿಸುವ ಮೂಲಕ ಟಿಕೆಟ್ ಪಡೆಯಬಹುದು. ವಾಟ್ಸಾಪ್​​ನಲ್ಲಿ ಖರೀದಿಸಿದ ಟಿಕೆಟ್ 5 ದಿನದವರೆಗೆ ಮಾನ್ಯತೆ ಇರುತ್ತದೆ. ಇದರಿಂದ ಸರತಿ ಸಾಲಿನಲ್ಲಿ ಬಂದು ಟಿಕೆಟ್ ಖರೀದಿಸುವ ಸಮಯ ಸೇವ್ ಆಗಲಿದೆ.

Share post:

Subscribe

spot_imgspot_img

Popular

More like this
Related

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...