ಆಲಮಟ್ಟಿ ಜಲಾಶಯ ಭರ್ತಿ: ನಾಳೆ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!

Date:

 

ಉತ್ತರ ಕನ್ನಡ:- ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದ್ದು, ಭಾರೀ ಮಳೆಯಿಂದ ಭರ್ತಿಯಾಗಿದೆ.

ಈ ಜಲಾಶಯ 9 ಜಿಲ್ಲೆಗಳಿಗೆ ನೀರು ಒದಗಿಸುತ್ತದೆ. ಈ ಜಲಾಶಯದಲ್ಲಿ ವಿದ್ಯುತ್​ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ನಿರ್ಮಾಣ ಮಾಡಲಾಗಿದೆ. 519.60 ಮೀಟರ್‌ ಎತ್ತರದಲ್ಲಿ 123.08 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಮಂಗಳವಾರ ಬೆಳಗ್ಗೆ 123.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು: 19968 ಕ್ಯೂಸೆಕ್, ಹೊರ ಹರಿವು: 19968 ಕ್ಯೂಸೆಕ್ ಇದೆ.

ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್​​ಎಎಲ್​ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್​ಸ್ಟ್ರಿಪ್​ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.

ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...