ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Date:

 

ಮಂಗಳೂರು:- ಕಿಡಿಗೇಡಿಗಳು ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ.

ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡಿಸೋಜಾ ಅವರ ಮಂಗಳೂರಿನ ವೆಲೆನ್ಸಿಯಾದ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ಮಾಡಿದ್ದಾರೆ.

ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್ ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಹಾನಿಯಾಗಿವೆ.

ಹೊರಗೆ ಹೋಗಿದ್ದ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಅವರು ಮನೆ ಬಳಿ ಕಾರು ಪಾರ್ಕ್ ಮಾಡಿ ಒಳಗೆ ಹೋದ ಐದು ನಿಮಿಷದಲ್ಲೇ ಕಲ್ಲು ತೂರಾಟ ನಡೆದಿದೆ. ಬೈಕ್​ನಲ್ಲಿ ಇಬ್ಬರು, ನಡೆದುಕೊಂಡು ಇಬ್ಬರು ಬಂದು ಕಲ್ಲು ತೂರಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ‌ ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಘಟನೆ ನಡೆಯುವಾಗ ಐವನ್ ಡಿಸೋಜಾ ಅವರು ಮನೆಯಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಐವನ್ ಡಿಸೋಜಾ ಅವರು ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್‌ಗೆ ಹೋಗಿದ್ದರು. ಪತ್ನಿ ಡಾ.ಕವಿತಾ ಐವನ್ ಡಿಸೋಜ ಅವರು ಆಗಷ್ಟೇ ಮನೆಗೆ ಬಂದಿದ್ದರು. ಮನೆಯಲ್ಲಿ ಇಬ್ಬರು ಪುತ್ರಿಯರು, ಕವಿತಾ ಅವರ ಸಹೋದರ ಮಾತ್ರ ಇದ್ದರು. ಎರಡನೇ ಬಾರಿ ಕಲ್ಲು ತೂರಾಟ ನಡೆಸುವಾಗ ಐವನ್ ಡಿಸೋಜಾ ಅವರ ಪುತ್ರಿ ಮಹಡಿ ಮೇಲಿಂದ ನೋಡಿದ್ದಾರೆ. ಎರಡು ಬಾರಿ ಕಲ್ಲು ತೂರಾಟ ನಡೆಸಲಾಗಿದ್ದು, ಎರಡು ಬಾರಿಯೂ ಒಂದೇ ತಂಡವೇ ಕಲ್ಲು ತೂರಾಟ ಮಾಡಿದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...