No menu items!
23.4 C
Munich
Saturday, May 2, 2026

ಗಣಿತದಲ್ಲಿ ಕಡಿಮೆ ಮಾರ್ಕ್ಸ್ ತೆಗೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ!

Must read

 

ಯಾದಗಿರಿ:- ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ‌ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಜರುಗಿದೆ.

ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸೈದಾಪುರ ಪಟ್ಟಣದಲ್ಲಿರುವ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಖಾಸಗಿ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ನಡೆಯುತ್ತಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ.

ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article