ಹೊಸಕೋಟೆ:-15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರ ಯತ್ನಿಸಿದ ಘಟನೆ ಹೊಸಕೋಟೆಯಲ್ಲಿ ಜರುಗಿದೆ. ಪೋಷಕರು ಆರತಕ್ಷತೆ ಮುಗಿಸಿ ಮದುವೆಗೆ ಹರಿಶಿನ ಶಾಸ್ತ್ರ ಮಾಡ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಮದುವೆ ನಿಲ್ಲಿಸಿದರು. ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀಯಿಂದ ದಾಳಿ ನಡೆದಿದೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ. ಬಾಲಕಿಯನ್ನ ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಅಧಿಕಾರಿಗಳು ಕರೆತಂದಿದ್ದಾರೆ.
ಪೋಷಕರ ವಿರುದ್ದ ಬಾಲ್ಯ ವಿವಾಹ ನಿಷೇದ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹ ನಡೆಯುತ್ತಿತ್ತು ಎನ್ನಲಾಗಿದೆ.