ಜೈಲಲ್ಲಿ ದಾಸನ ಬಿಂದಾಸ್ ಲೈಫ್: ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ!

Date:

ಬೆಂಗಳೂರು:- ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ಹಿನ್ನೆಲೆ, ಪ್ರಕರಣದ ತನಿಖೆಗಾಗಿ 3 ವಿಶೇಷ ತಂಡ ರಚನೆ ಮಾಡಲಾಗಿದೆ.

ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್​ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.

ಬೇಗೂರು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತದೆ. ಜೈಲಿನ ಲಾನ್​ನಲ್ಲಿ ಕುಳಿತು ಕಾಫಿ ಸಿಗರೇಟ್ ಸೇವನೆ, ರೌಡಿಶೀಟರ್​ಗಳ ಜೊತೆ ದರ್ಶನ್ ಬೇರೆತಿದ್ದು ಹೇಗೆ? ಲಾನ್​ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು? ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ, ಹೇಗೆ ಒಳಗೆ ಬಂತು ಅಂತ ತನಿಖೆ ನಡೆಸುತ್ತಾರೆ.

ಎರಡನೇ ಪ್ರಕರಣ: ಮೊಬೈಲ್ ಫೋನ್​ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಫೋಟೋ ತೆಗೆದಿದ್ದು ಹಾಗೂ ವಿಡಿಯೋ ಕರೆ ಮಾಡಿದ್ದು ಯಾರು? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು ಹೇಗೆ.? ಒದಗಿಸಿದವರು ಯಾರು, ನೆಟ್ ಕನೆಕ್ಷನ್ ಹೇಗೆ ಬಂತು ಎಂಬೆಲ್ಲ ತನಿಖೆ ನಡಯುತ್ತದೆ. ಹೊರಗಡೆಯಿಂದ ಜೈಲಿನೊಳಗೆ ವಿಡಿಯೋ ಕರೆ ಮಾಡಿರುವ ಬಗ್ಗೆಯೂ ತನಿಖೆ ನಡೆಯಲಿದೆ.

ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಮೂರನೇ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ತನಿಖೆ ನಡೆಸುತ್ತದೆ.

ರೇಣುಕಾಸ್ವಾಮಿ ಮರ್ಡರ್​ ಕೇಸ್​ನಲ್ಲಿ ಜೈಲು ಪಾಲಾದ ದರ್ಶನ್​ಗೆ ಜಾಮೀನು ಕೊಡಿಸಲು ಅವರ ಕುಟುಂಬದವರು ಪ್ರಯತ್ನಿಸುತ್ತಿದ್ದಾರೆ. ಆದರೆ ಈಗ ಜೈಲಿನ ಒಳಗೆ ದರ್ಶನ್​ ಅಕ್ರಮ ಎಸಗಿರುವುದು ಬೆಳಕಿಗೆ ಬಂದಿದೆ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...