ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ. ನಿಯಮದ ಪ್ರಕಾರ ರಾತ್ರಿ ವೇಳೆ ವಿಚಾರಣಾದೀನ ಕೈದಿಗಳನ್ನು ಸ್ಥಳಾಂತರ ಮಾಡುವಂತಿಲ್ಲ. ಆದ್ರೆ ಭದ್ರತಾ ದೃಷ್ಟಿಯಿಂದ ದರ್ಶನ್ರನ್ನು ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆದುಕೊಂಡು ಹೊರಟಿದ್ದರು. ಇದೀಗ ದರ್ಶನ್ ಅವರನ್ನು ಕರೆದುಕೊಂಡು ಹೊರಟಿದ್ದ ಪೊಲೀಸ್ ವಾಹನ ಬಳ್ಳಾರಿ ಜೈಲು ತಲುಪಿವೆ. ದರ್ಶನ್ ಬಳ್ಳಾರಿ ಜೈಲು ಸೇರಿದ್ದಾರೆ.
ಬೊಲೆರೋ ವಾಹನದಲ್ಲಿ ದರ್ಶನ್ ಅವರನ್ನು ಪೊಲೀಸರು ಕರೆದೊಯ್ದಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ಯಲಾಗಿದೆ. ಇತ್ತೀಚೆಗೆ ದರ್ಶನ್ ಅವರು ಜೈಲಿನಲ್ಲಿ ಸಿಗರೇಟ್ ಸೇದಿದ್ದ ಫೋಟೋ ವೈರಲ್ ಆಗಿತ್ತು. ಈ ಫೋಟೋದಿಂದ ಸರ್ಕಾರಕ್ಕೆ ತಲೆನೋವಾಗಿತ್ತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗಿದೆ.
́