ಲವ್ ಬ್ರೇಕಪ್: ಮಂಗಳಮುಖಿಗೆ ಚಾಕು ಇರಿದ ಯುವಕ!

Date:

 

ತುಮಕೂರು: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ (21) ಚಾಕುವಿನಿಂದ ಇರಿತಕ್ಕೊಳಗಾದ ಮಂಗಳಮುಖಿಯಾಗಿದ್ದು, ಮಂಡ್ಯದ ಆದಿಲ್‌ (23) ಚಾಕು ಇರಿದ ವ್ಯಕ್ತಿಯಾಗಿದ್ದಾನೆ. ಕಳೆದ ಆರು ತಿಂಗಳಿಂದ ಹನೀಷಾ ಹಾಗೂ ಆದಿಲ್ ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ, ಪರ ಊರುಗಳಿಗೆ ಆಗಾಗ ಹೋಗುತ್ತಿದ್ದರು. ಇದನ್ನು ಸಹಿಸದ ಆದಿಲ್‌, ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸುತ್ತಿದ್ದನು. ಇದರಿಂದ ಬೇಸತ್ತು ಪ್ರೇಮ ನಿರಾಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಆದಿಲ್ ಚಾಕುವಿನಿಂದ ಇರಿದಿದ್ದಾನೆ. ಇನ್ನು ಗಾಯಾಳು ಹನೀಷಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...