ಕಿಚ್ಚ ಸುದೀಪ್ ಹಾಗೂ ಅನುಪ್ ಭಂಡಾರಿ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಅವರು ಮತ್ತೆ ಒಂದಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಸಿನಿಮಾ ಕುರಿತ ಅಧಿಕೃತ ಮಾಹಿತಿ ಸಿಗಲಿದೆ. ಸದ್ಯ ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಸುದೀಪ್ ಬರ್ತ್ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ. ಈ ಬಗ್ಗೆ ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ‘ಬಿಲ್ಲ ರಂಗ ಭಾಷ’ ಸಿನಿಮಾ ಕುರಿತ ಅಪ್ಡೇಟ್ ಇರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ.
ಸುದೀಪ್ ಅವರಿಗೆ ಸೆಪ್ಟೆಂಬರ್ 2ರಂದು ಜನ್ಮದಿನ. ಈ ವಿಶೇಷ ದಿನದಂದು ಸುದೀಪ್ ಮುಂದಿನ ಸಿನಿಮಾಗಳ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ. ‘ಬಿಲ್ಲ ರಂಗ ಭಾಷಾ’ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ.