No menu items!
11.2 C
Munich
Sunday, May 3, 2026

ಲೈಂಗಿಕ ದೌರ್ಜನ್ಯ ಕೇಸ್: ಹೆಚ್ ಡಿ ರೇವಣ್ಣಾಗೆ ಮಧ್ಯಂತರ ರಿಲೀಫ್ ಕೊಟ್ಟ ಹೈಕೋರ್ಟ್!

Must read

 

ಬೆಂಗಳೂರು:-ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿದೆ.

ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್​​ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದ್ದಾರೆ.

ಹೆಚ್​ಡಿ ರೇವಣ್ಣ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಕಲಂ 354A, 354D ಅಡಿ ಹಳೆಯ ದೂರುಗಳಿಗೆ ಎಫ್ಐಆರ್ ದಾಖಲಿಸುವಂತಿಲ್ಲ. ನಾಲ್ಕು ವರ್ಷಗಳ ಹಿಂದಿನ ದೂರಿಗೆ ಈಗ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ 506, 509 ಸೆಕ್ಷನ್ ದೂರಿನಲ್ಲಿರುವ ಅಂಶಗಳಿಗೆ ಅನ್ವಯವಾಗುವುದಿಲ್ಲ. ಹೀಗಾಗಿ ಎಫ್ಐಆರ್ ರದ್ದುಪಡಿಸುವಂತೆ ಮನವಿ ಮಾಡಿದರು.

ಸರ್ಕಾರದ ಪರ ವಾದಿಸಿದ ಎಸ್​ಪಿಪಿ ರವಿವರ್ಮ ಕುಮಾರ್, ಈಗಾಗಲೇ ಆರೋಪಪಟ್ಟಿ ದಾಖಲಿಸಿರುವುದಾಗಿ ಮಾಹಿತಿ ನೀಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಂ.‌ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೆಪ್ಟೆಂಬರ್​ 19ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದರು.

- Advertisement -spot_img

More articles

- Advertisement -spot_img

Latest article