ವಿಶ್ವದ ನಂ.1 ಇ-ಕಾಮರ್ಸ್ ಕಂಪನಿಯಾದ ಅಮೇಜಾನ್ ಇಂಡಿಯಾಗೆ ಈಗ ಕಂಟಕ ಶುರುವಾಗಿದೆ. ತಮ್ಮ ಸಂಸ್ಥೆಯಲ್ಲಿ ಕನ್ನಡಕ್ಕೆ ಆದ್ಯತೆ ಇಲ್ಲದ ಕಾರಣದಿಂದಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ನೋಟೀಸ್ ಜಾರಿಗೊಳಿಸಿದೆ. ಕನ್ನಡ ಭಾಷೆ ಕುರಿತಾಗಿ ಈ ಸಂಸ್ಥೆ ತೀವ್ರ ನಿರ್ಲಕ್ಷ್ಯ ವಹಿಸಿದ್ದು ಇನ್ನು ಹದಿನೈದು ದಿನಗಳೊಳಗಾಗಿ ಕನಾಟಕ ರಾಜ್ಯದ ಎಲ್ಲಾ ನೀತಿ ನಿಯಮಗಳನ್ನು ಪಾಲಿಸಲೇ ಬೇಕು ಎಂದು ಪ್ರಾಧಿಕಾರ ಖಡಕ್ ಎಚ್ಚರಿಕೆ ನೀಡಿದ್ದಾರೆ..! ಅಮೇಜಾನ್ ಸಂಸ್ಥೆಯ ಕಂಪನಿಗಳು ಬೆಂಗಳೂರಿನಲ್ಲಿಯೇ ಮುಖ್ಯ ಕಛೇರಿಯನ್ನು ಹೊಂದಿದ್ದು, ಬೆಂಗಳೂರು ಕಛೇರಿಯಲ್ಲಿ ಒಟ್ಟು ಎಷ್ಟು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಆ ಪೈಕಿ ಕನ್ನಡ ಮಾತನಾಡುವ ಉದ್ಯೋಗಿಗಳ ಸಂಖ್ಯೆ ಎಷ್ಟಿದೆ..? ಗ್ರಾಹಕರ ಸೇವಾ ವಿಭಾಗವೂ ಸೇರಿದಂತೆ ಕಂಪನಿಯ ಇತರೆ ವಿಭಾಗಗಳಲ್ಲಿ ಕನ್ನಡ ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ..? ಎಂಬ ಹಲವಾರು ಮಾಹಿತಿಗಳನ್ನು ಸಲ್ಲಿಸುವಂತೆ ಅಮೇಜಾನ್ ಸಂಸ್ಥೆಗೆ ಸೂಚನೆ ನೀಡಲಾಗಿದೆ. ಇನ್ನು ಈ ಸಂಸ್ಥೆಯಲ್ಲಿ ಲಕ್ಷಾಂತರ ಮಂದಿ ಕಾರ್ಯ ನಿರ್ವಹಿಸುತ್ತಿರಬಹುದು ಆದರೆ ಪ್ರಧಾನ ಕಛೇರಿ ಬೆಂಗಳೂರಿನಲ್ಲಿಟ್ಟುಕೊಂಡಿದ್ದರೂ ಕನ್ನಡಕ್ಕೆ ಪ್ರಾಶಸ್ತ್ಯ ನೀಡಿಲ್ಲ. ಅಲ್ಲದೇ ಕನ್ನಡದಲ್ಲಿ ಮಾತನಾಡುವ ಗ್ರಾಹಕರಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತನಾಡಿ ಎಂದು ಹೇಳಲಾಗ್ತಾ ಇದೆ ಎಂದು ನೋಟೀಸ್‍ನಲ್ಲಿ ತಿಳಿಸಲಾಗಿದೆ.
ಅಮೇಜಾನ್‍ನ ಕಿಂಡಲ್ ಇ ಬುಕ್ ರೀಡರ್‍ನಲ್ಲಿ ಕನ್ನಡ ಪುಸ್ತಕ ಮಾರಾಟ ನಿಷೇಧವಿದೆ ಎಂಬ ದೂರು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಕನ್ನಡ ಪ್ರಾಧಿಕಾರ ಮುಂದಾಗಿದೆ. ಈ ಕುರಿತು ಬೆಂಗಳೂರು ಜಿಲ್ಲಾಧಿಕಾರಿ ಹಾಗೂ ಕೈಗಾರಿಕಾ ಇಲಾಖೆಗೆ ಕನ್ನಡ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಎಲ್ ಹನುಮಂತಯ್ಯ ಖಾತ್ರಿ ಪಡಿಸಿದ್ದಾರೆ.
POPULAR STORIES :
ಇನ್ನು ಕೆಲವೇ ದಿನಗಳಲ್ಲಿ ಶಿರಾಡಿ ಘಾಟ್ ಬಂದ್..!
ನಾನು ನಿನ್ನ ಮದ್ವೆ ಆಗ್ತೀನಿ.. ಅಂದಿದಕ್ಕೆ ತಲೆ ತಿರುಗಿ ಬಿದ್ಲು ನಾರಿ..! ಯಾಕೆ ಗೊತ್ತಾ..
ನೀವು ಕುಡಿಯೋದು ಕೂಲ್‍ಡ್ರಿಂಕ್ಸ್ ಅಲ್ಲ ಬದಲಾಗಿ ವಿಷ..!
ಧೋನಿ ಚಿತ್ರದಲ್ಲಿ ಸ್ವಂತ ಅಣ್ಣನ ಪಾತ್ರವೇ ಇಲ್ಲ ಯಾಕೆ ಗೊತ್ತಾ..?
ಮತ್ತೊಂದು ಮದುವೆ ವದಂತಿ ಸುಳ್ಳು: ರಾಧಿಕಾ ಕುಮಾರ ಸ್ವಾಮಿ.
24ರ ಹರೆಯದ ಯುವತಿ 68ರ ತಾತನ ಅಚ್ಚರಿಯ ಜುಗಲ್‍ಬಂಧಿ…!
ಲೋಧಾ ಶಿಫಾರಸ್ಸು ಉಲ್ಲಂಘನೆ: 3ನೇ ಟೆಸ್ಟ್ ಪಂದ್ಯ ನಡೆಯೋದು ಬಹುತೇಕ ಡೌಟ್..?
ಪಾಕ್ ವಿರುದ್ದದ ಆನ್ಲೈನ್ ಅರ್ಜಿಯನ್ನು ಆರ್ಕೈವ್ ಪಟ್ಟಿಗೆ ಹಾಕಿ ತನ್ನ ದ್ವಂದ್ವ ನಿಲುವು ಪ್ರದರ್ಶಿದ ಅಮೇರಿಕಾ..!