ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: BJP ಮುಖಂಡ ಪುತ್ತಿಲ ವಿರುದ್ಧ FIR

Date:

 

ಮಂಗಳೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು‌ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡಿದ್ದಾರೆಂದು ಸಹ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ಏನಿದೆ?
ಅರುಣ್‌ ಪುತ್ತಿಲ ಅವರು, 2023ರಲ್ಲಿ ಪುತ್ತೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿಗೆ ಠಕ್ಕರ್‌ ಕೊಟ್ಟು ಹಿಂದುತ್ವದ ಹೆಸರಿನಲ್ಲಿ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅಭಿಮಾನಿಯಾಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಸಿದ್ದಾರೆ. ಬಳಿಕ ದೂರುದಾರರ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.
2024ರ ಲೋಕಸಭಾ ಚುನಾವಣೆಯ ಬಳಿಕ ನನ್ನೊಂದಿಗೆ ಮಾತುಕತೆ ಕಡಿಮೆಗೊಳಿಸಿದ್ದರು. ನನ್ನನ್ನು ಸಂಪೂರ್ಣವಾಗಿ ಶೋಷಣೆಗೆ ಒಳಪಡಿಸಿ ಅವರ ಆಸೆ ತೀರಿಸಿಕೊಂಡು ನನ್ನನ್ನು ದೂರ ಮಾಡಿದರು. ಆ ಭಯದಿಂದ ನನ್ನ ನಿವಾಸವನ್ನು ಪುತ್ತೂರಿಗೆ ಸ್ಥಳಾಂತರಿಸಿ ಬಾಡಿಗೆ ಮನೆಯಲ್ಲಿ ನನ್ನ ಮಗಳೊಂದಿಗೆ ಉದ್ಯೋಗ ಹಾಗೂ ವರಮಾನವಿಲ್ಲದೇ ಕಷ್ಟಪಡುತ್ತಿದ್ದೇನೆ. ನನಗೆ ಮತ್ತು ನನ್ನ ಮಗಳಿಗೆ ಪುತ್ತಿಲರು ಮಾಡಿದ ದ್ರೋಹ, ಅನ್ಯಾಯ, ಅಕ್ರಮ ವಿಶ್ವಾಸ ದ್ರೋಹಕ್ಕೆ ಕಾನೂನು ಕ್ರಮ ಕೈಗೊಂಡು ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...