ಬಾಂಗ್ಲಾ ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ವೇಶ್ಯಾವಾಟಿಕೆ: ಮೂವರು ಅರೆಸ್ಟ್!

Date:

 

ಬೆಂಗಳೂರು:- ಬಾಂಗ್ಲಾ ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದ ಮೂವರನ್ನು ಅರೆಸ್ಟ್ ಮಾಡಲಾಗಿದೆ.

ಸಿಸಿಬಿ ಪೊಲೀಸರು ನಡೆಸಿದ ದಾಳಿಯಿಂದ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿ ಇಬ್ಬರು ಹುಡುಗಿಯರು ಪತ್ತೆಯಾಗಿದ್ದಾರೆ.

ಬಂಧಿತರಲ್ಲಿ ಇಬ್ಬರು ಒರಿಸ್ಸಾ ಮೂಲದವರು, ಒಬ್ಬ ಸ್ಥಳೀಯ ನಿವಾಸಿ. ಸೂರಜ್ ಸಾಹಜಿ, ಕರಿಷ್ಮಾ ಶೇಕ್, ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಬ್ರಮಣ್ಯ ಶಾಸ್ತ್ರಿ ಸ್ಥಳೀಯನಾಗಿದ್ದು, ಸಾಫ್ಟ್​​ವೇರ್ ಇಂಜಿನಿಯರ್ ಆಗಿದ್ದಾನೆ.

ದಾಳಿ ವೇಳೆ ಪತ್ತೆಯಾದ ಇಬ್ಬರೂ ಸಹ ಅಪ್ರಾಪ್ತೆಯರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಅಲ್ಲದೆ, ಅವರು ಬಾಂಗ್ಲಾ ಮೂಲದವರು ಎನ್ನಲಾಗಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿ ಸುಬ್ರಮಣ್ಯ ಶಾಸ್ತ್ರಿ, ಎಳೆ ಹುಡುಗಿಯರೇ ಬೇಕು ಎಂದು ಕರೆಸಿಕೊಂಡಿದ್ದ. ಹೀಗಾಗಿ ಇನ್ನಿಬ್ಬರು ಆರೋಪಿಗಳು ಅಪ್ರಾಪ್ತೆಯರನ್ನು ಕರೆತಂದಿದ್ದರು ಎನ್ನಲಾಗಿದೆ.

ಬಂಧಿತರ ವಿಚಾರಣೆ ವೇಳೆ, ಅಪ್ರಾಪ್ತ ಹುಡುಗಿಯರನ್ನು ಬಾಂಗ್ಲಾದೇಶದಿಂದ ಕಳ್ಳಸಾಗಣೆ‌ಮಾಡಿ ಕರೆತಂದಿದ್ದು ಪತ್ತೆಯಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. 15 ಹಾಗೂ 16 ವಯಸ್ಸಿನ ಹುಡುಗಿಯರನ್ನು ಕರೆತರಲಾಗಿತ್ತು. ನಂತರ ಅವರನ್ನು ಹೊಂಗಸಂದ್ರದ ಬಾಡಿಗೆ ಮನೆಯಲ್ಲಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...