ಮೈಸೂರು:- ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ರಾಜಮನೆತನ ವಿರೋಧ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯುತ್ತಿರುವ ಸಭೆಗೆ ಹಾಜರಾಗುವಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಮೋದಾದೇವಿ ಒಡೆಯರ್ ಅವರಿಗೆ ಸೂಚನಾ ಪತ್ರ ಕಳುಹಿಸಲಾಗಿದೆ. ಆದರೆ, ಪ್ರಾಧಿಕಾರದ ಸಭೆಗೆ ಪ್ರಮೋದದೇವಿ ಒಡೆಯರ್ ಅವರು ಲಿಖಿತ ಮೂಲಕವೇ ಆಕ್ಷೇಪ ವ್ಯಕ್ಯಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಮುಂದೂಡಲು ಸಾಧ್ಯವಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕಾನೂನಾತ್ಮಕವಾಗಿ ಮಾಡುತ್ತಿದ್ದೇನೆ. ಯಾರದ್ದೋ ಹೇಳಿಕೆ ಆಧರಿಸಿ ಸಭೆ ಮಾಡಲು ಆಗುವುದಿಲ್ಲ. ಸಭೆ ಮುಂದೂಡಲು ಸಾಧ್ಯವಿಲ್ಲ ಎಂದರು.
ಯದುವೀರ್ ಹೇಳಿಕೆ ಮುಖ್ಯವೋ ಕಾನೂನು ಮುಖ್ಯವೋ? ನಾನು ಕಾನೂನು ಪ್ರಕಾರವೇ ಇವತ್ತಿನ ಸಭೆ ಮಾಡುತ್ತಿದ್ದೇನೆ. ಕೋರ್ಟ್ನಲ್ಲಿ ತಡೆಯಾಜ್ಞೆ ತೆರವು ಆಗಿದ್ದಕ್ಕೆ ಸಭೆ ಮಾಡುತ್ತಿದ್ದೇನೆ ಎಂದು ಕಡ್ಡಿ ಮುರಿದಂತೆ ಸಿದ್ದರಾಮಯ್ಯ ಹೇಳಿದ್ದಾರೆ.