ಕಲಬುರಗಿಯಲ್ಲಿ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಸರ್ಕಾರಿ ಅಧಿಕಾರಿಗಳು!
ಕಲಬುರ್ಗಿ:- ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಖೆಡ್ಡಾಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.
ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ ರೆಡ್ಡಿ, ಮಂಜು ಭಂಡಾರಿ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ
ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 10ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡಿದ್ದಾರೆ.
ನಂತರ, ದೊಡ್ಡ ದೊಡ್ಡ ಉದ್ಯಮಿ, ಅಧಿಕಾರಿಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ತಾವು ಟಾರ್ಗೆಟ್ ಮಾಡಿದವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಅಧಿಕಾರಿಗಳು ಅಥವಾ ಉದ್ಯಮಿಗಳು ಯುವತಿಯರೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ಫೋಟೋ ತೆಗೆದುಕೊಂಡು, ವಿಡಿಯೋ ರೆಕಾರ್ಡ್ ಮಾಡಿಕೊಂಡು, ಹಣಕ್ಕೆ ಬೇಡಿಕೆ ಇಡುತ್ತಾರೆ. ಇದೀಗ ದೂರು ಆಧರಿಸಿ FIR ದಾಖಲಿಸಲಾಗಿದೆ.