ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಸ್ಟಾರ್ ನಟಿ ದೀಪಿಕಾ ಪಡುಕೋಣೆ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಯಲ್ಲಿ ಸಂಭ್ರಮ ಮನೆಮಾಡಿದ್ದು, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿ ಚೊಚ್ಚಲ ಕಂದನನ್ನು ಬರಮಾಡಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅದರಲ್ಲೂ ಗಣೇಶ ಹಬ್ಬದಲ್ಲೇ ಮಗು ಜನಿಸಿದ್ದು ಎಲ್ಲಾರಿಗೂ ಸಂತೋಷ ತಂದಿದೆ.
ಇತ್ತೀಚೆಗಷ್ಟೇ ಮುಂಬೈನ ಸಿದ್ಧಿ ವಿನಾಯಕನ ಮಂದಿರಕ್ಕೆ ಈ ಜೋಡಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿತ್ತು. ತಮ್ಮ ಬಾಳಿನ ಹೊಸ ಅಧ್ಯಾಯ ಶುರುವಾಗುವುದಕ್ಕೂ ಮುನ್ನವೇ ಸಿದ್ಧಿ ವಿನಾಯಕನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಎಲ್ಲವೂ ನಿರ್ವಿಘ್ನವಾಗಿ ಸಾಗಲಿ ಎಂದು ಬೇಡಿಕೊಂಡಿದ್ದರು. ಈಗ . ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.