No menu items!
28.4 C
Munich
Monday, May 25, 2026

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: ದರ್ಗಾ ಮುಂದೆ ಬರದಂತೆ ಮುಸ್ಲೀಮರ ಕ್ಯಾತೆ!

Must read

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ: ದರ್ಗಾ ಮುಂದೆ ಬರದಂತೆ ಮುಸ್ಲೀಮರ ಕ್ಯಾತೆ!

ಮಂಡ್ಯ:- ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಗದ್ದಲ, ಕೋಲಾಹಲ ನಡೆದಿದೆ. ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ್ದಾರೆ.

ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಗ್ತಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ದರ್ಗಾ ಬಳಿ ಮೆರವಣಿಗೆ ಮಾಡಬಾರದು ಎಂದು ಗಲಾಟೆ ಮಾಡಿದ್ದಾರೆ. ಜತೆಗೆ ತಮಟೆ, ಡೊಳ್ಳು ಕೂಡ ಬಾರಿಸಬಾರದು ಎಂದು ಕಿರಿಕ್ ತೆಗೆದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದೇ ವೇಳೆ ತಳ್ಳಾಟ ಕೂಡ ಆಗಿದ್ದು, ಅನ್ಯಕೋಮಿನ ಯುವಕರು ಕತ್ತಿ ಜಳಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಲ್ಲು ತೂರಾಟದಿಂದ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article