No menu items!
20.9 C
Munich
Monday, May 25, 2026

ದೆಹಲಿ ಸಿಎಂ ಕೇಜ್ರಿವಾಲ್ʼಗೆ ಬಿಗ್ ರಿಲೀಫ್: ಜಾಮೀನು ಮಂಜೂರು!

Must read

ದೆಹಲಿ ಸಿಎಂ ಕೇಜ್ರಿವಾಲ್ʼಗೆ ಬಿಗ್ ರಿಲೀಫ್: ಜಾಮೀನು ಮಂಜೂರು!

ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ʼನಿಂದ ಬಿಗ್‌ ರಿಲಿಫ್‌ ಸಿಕ್ಕಿದೆ. ದೆಹಲಿ ಮದ್ಯ ನೀತಿ ಹಗರಣದಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾದ ಆರು ತಿಂಗಳ ನಂತರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಬಿಐ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಬಂಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮಂಜೂರು ಮಾಡುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ಪ್ರಶ್ನಿಸಿ ಕೇಜ್ರಿವಾಲ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಪ್ರಕರಣವನ್ನು ಆಲಿಸಿ ತೀರ್ಪು ನೀಡಿದ್ದು, ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

- Advertisement -spot_img

More articles

- Advertisement -spot_img

Latest article